Select Your Language

Notifications

webdunia
webdunia
webdunia
webdunia

ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ : ಬೊಮ್ಮಾಯಿ

ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ : ಬೊಮ್ಮಾಯಿ
ಹುಬ್ಬಳ್ಳಿ , ಮಂಗಳವಾರ, 21 ಮಾರ್ಚ್ 2023 (13:02 IST)
ಹುಬ್ಬಳ್ಳಿ : ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. 

ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯವುದೇ ಪರಿಣಾಮ ಬೀರಲ್ಲ. ಇವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಲಿಲ್ಲ. ಸೋಮವಾರ ಹುಬ್ಬಳ್ಳಿಯಲ್ಲಿ ಮಾಡಿದ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ.

ಅವರು ಕಳೆದ ಬಾರಿ ರಾಜ್ಯಕ್ಕೆ ಬಂದಿರುವುದಕ್ಕೆ ಹಾಗೂ ಈ ಸಲ ಬಂದಿರುವುದಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಜನರು ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.  ಸಿದ್ದರಾಮಯ್ಯನವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಲಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್.

ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಲಿಲ್ಲ. ಛತ್ತೀಸ್ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ. ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡದೇ ಕೊನೆಯ ವರ್ಷ ಕೊಡಲು ಓಡಾಡಿದರು. ಈ ರೀತಿಯಾಗಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ನಂಬಿಸಿ ವಿಧವೆಗೆ 12 ಲಕ್ಷ ವಂಚಿಸಿದ 56ರ ವ್ಯಕ್ತಿ!