Publish Date: Wed, 06 Nov 2019 (11:20 IST)
Updated Date: Wed, 06 Nov 2019 (11:23 IST)
ಬೆಂಗಳೂರು : ನಾನು ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಎಸ್ ಪಿ ಯಿಂದ ಉಚ್ಛಾಟಿತ ಶಾಸಕ ಎನ್.ಮಹೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ವರ್ಷಗಳ ಕಾಲ ಸ್ವತಂತ್ರವಾಗಿರುತ್ತೇನೆ. ಕ್ಷೇತ್ರದ ಜನರ ನಿರೀಕ್ಷೆಯಂತೆ ಕೆಲಸ ಮಾಡಬೇಕಿದೆ. ನಾನು ಸ್ವತಂತ್ರ ಶಾಸಕ. ನನ್ನನ್ನ ಬಿಎಸ್ ಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದ್ದರಿಂದ ಮತ್ತೆ ಬಿಎಸ್ ಪಿ ಸೇರಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಹಾಗೇ ಬಿಜೆಪಿಯವರ ಜೊತೆಗೆ ಸಂಪರ್ಕದಲ್ಲಿರುವುದಕ್ಕೆ ಸ್ಪಷ್ಟನೆ ನೀಡಿದ ಅವರು, ಸದ್ಯ ಬಿಜೆಪಿ ಸರ್ಕಾರ ಇದೆ. ಹೀಗಾಗಿ ಅವರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.