Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ: ಸತೀಶ್ ಜಾರಕಿಹೊಳಿ
ಬೆಂಗಳೂರು , ಮಂಗಳವಾರ, 9 ಮೇ 2017 (18:43 IST)
ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ ಎನ್ನುವ ವರದಿಗಳು ಸತ್ಯಕ್ಕೆ ದೂರ ಕಪೋಲಕಲ್ಪಿತವಾಗಿವೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿಸಿ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ಸುದ್ದಿ ಹರಡಿಸಲಾಗುತ್ತಿದೆ. ಆದರೆ,ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ರೈತಪರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.
 
ರಾಜಕೀಯ ವಿರೋಧಿಗಳು ನಾನು ಪಕ್ಷ ತೊರೆಯುತ್ತೇನೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಜನತೆ ಇಂತಹ ವರದಿಗಳನ್ನು ನಂಬುವುದು ಬೇಡ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುತ್ತೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್‌‍ನಿಂದ ರಿಲೀಫ್