Publish Date: Sun, 13 Sep 2026 (15:01 IST)
Updated Date: Sun, 13 Sep 2026 (15:04 IST)
ಗದಗ: ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದ್ದು, ಆದರೆ ಕಾಂಗ್ರೆಸ್‌ನ ಒಳಗೆ ಯಾವುದೇ ಒಡಕ್ಕಿಲ್ಲ, ಎಲ್ಲ ನಾಯಕರು ಒಗ್ಗಟ್ಟಿನ್ನಲ್ಲಿದ್ದಾರೆಂದು ಆರೋಗ್ಯ ಸಚಿವ ಯುಟಿ ಖಾದರ್ ಸ್ಪಷ್ಟನೆ ನೀಡಿದರು.
ಗದಗನಲ್ಲಿ ಸ್ವಪಕ್ಷ ನಾಯಕನ ಕೈವಾಡ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಟಾರ್ಗೆಟ್ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ಪರಮೇಶ್ವರ ಸೇರಿದಂತೆ ಎಲ್ಲ ನಾಯಕರು ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುತ್ತಿದ್ದಾರೆಂದು ಹೇಳಿದರು.
ಯಾರೇ ಎಷ್ಟೇ ಅಪಪ್ರಚಾರ ಮಾಡಿದರೂ, ಏನೇ ಪ್ರಯತ್ನ ಮಾಡಿದರೂ ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ವಾತಾವರಣ ಸೃಷ್ಟಿಸಲು ಸಾಧ್ಯವಿಲ್ಲ. ಪಕ್ಷದೊಳಗೆ ಪರಸ್ಪರ ಸಮನ್ವಯವಿದೆ. ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ಮನೋಭಾವವಿದೆ ಎಂದು ಹೇಳಿದರು.
ರಾಜಕೀಯ ದೃಷ್ಟಿಯಿಂದ ಕೆಲವರು ಕಾಂಗ್ರೆಸ್ ಬಗ್ಗೆ ಒಂದೊಂದು ರೀತಿಯ ವ್ಯಾಖ್ಯಾನ ನೀಡುತ್ತಿದ್ದಾರೆಂದು ಎಂದು ಹೇಳಿದರು. ಆದರೆ ಅದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕಾಂಗ್ರೆಸ್‌ನ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇದ್ದಾರೆ ಎಂದು ಯು.ಟಿ. ಖಾದರ್ ಹೇಳಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ