ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಜೋರಾಗಿದೆ. ಕಾಂಗ್ರೆಸ್ ಸಚಿವರೇ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಆಟ ನಡೆಸುತ್ತಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಎದ್ದಿದೆ. ಈ ಬೆನ್ನಲ್ಲೇ ಸಿಎಂ ಬದಲಾವಣೆಯ ಕೂಗು ಜೋರಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ದೇವರಾಜು ಅರಸು ಅವರು ಏಳು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಏಳು ವರ್ಷಗಳಲ್ಲ, ಹತ್ತು ವರ್ಷ ಇರುತ್ತಾರೆ ಎಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಒತ್ತಾಯಿಸುವವರಿಗೆ ಕೌಂಟರ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಖ್ಯಮಂತ್ರಿ ಮಾಡಿದೆ. ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಇರುತ್ತಾರೆ. ಈಗ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ, ಈ ಅವಧಿ ಪೂರೈಸಿ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ. ಮುಂದಿನ ಬಾರಿಯ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.