Publish Date: Sun, 17 Sep 2017 (15:43 IST)
Updated Date: Sun, 17 Sep 2017 (15:45 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೂ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಒತ್ತಡವಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಜೈನ ಸಮುದಾಯ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಉತ್ತರ ಕರ್ನಾಟಕದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿ ಎಂದು ಬಯಸಿದ್ದಾರೆ. ಆದರೆ, ನಾನು ಅಂತಿಮ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ. ಮುಂಬರುವ ದಿನಗಳಲ್ಲಿ ಕುಮಾರಸ್ವಾಮಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವುದು ಬಹಿರಂಗಪಡಿಸುತ್ತೇನೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೆ ಕುಮಾರಸ್ವಾಮಿ ಕೂಡಾ ಉತ್ತರ ಕರ್ನಾಟಕದಿಂದ ಸ್ಪರ್ಧಿಸಲು ಬಯಸಿರುವುದು ಚುನಾವಣೆಯ ಬಿಸಿಯನ್ನು ಹೆಚ್ಚಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.