Publish Date: Wed, 13 Apr 2022 (19:25 IST)
Updated Date: Wed, 13 Apr 2022 (19:33 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಂತೋಷ್ ಯಾವುದೇ ಡೆತ್ ನೋಟ್ ಬರೆದು ಸೂಸೈಡ್ ಮಾಡಿಕೊಂಡಿಲ್ಲ. ಡೆತ್ ನೋಟ್ ಬರೆಯದೇ ಇದ್ರೂ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ವಾಟ್ಸ್ ಆ್ಯಪ್ ಸಂದೇಶದ ಬಗ್ಗೆ ಸಮಗ್ರ ತನಿಖೆ ಆಗ್ಬೇಕು. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಜೊತೆಗೆ ವರ್ಕ್ ಆರ್ಡರ್ ಇಲ್ಲದೆ ಕಾಮಗಾರಿ ಮಾಡೋ ಹಾಗಿಲ್ಲ. ಪ್ರಕರಣ ಸಂಬಂಧ ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್ಗೆ ಮಾಹಿತಿ ನೀಡಿದ್ದೇನೆ. ಕಾಂಗ್ರೆಸ್‌ನವರು ಯಾವುದೇ ರೀತಿಯ ದಾಖಲೆಗಳಿಲ್ಲದೆ ಆರೋಪ ಮಾಡ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ..ನಾನು ಒಮ್ಮೆಯೂ ಸಂತೋಷ್ ಮುಖ ನೋಡಿಲ್ಲ, ಗಣಪತಿ ಕೇಸ್‌ಗೂ, ಈ ಕೇಸ್‌ಗೂ ತುಂಬಾ ವ್ಯತ್ಯಾಸವಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.