Webdunia - Bharat's app for daily news and videos

Install App

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ

Sampriya
ಬುಧವಾರ, 11 ಸೆಪ್ಟಂಬರ್ 2024 (16:21 IST)
Photo Courtesy X
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ  ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ  ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ.
ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ

ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ

ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.

ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ , ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments