Select Your Language

Notifications

webdunia
webdunia
webdunia
webdunia

ತಮ್ಮ ಸ್ಥಾನವೇ ಅಲುಗಾಡುತ್ತಿರುವಾಗ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿದ್ದಾರೆ

MB Patil

Sampriya

ಬೆಳಗಾವಿ , ಶುಕ್ರವಾರ, 30 ಆಗಸ್ಟ್ 2024 (19:54 IST)
Photo Courtesy X
ಬೆಳಗಾವಿ: ಯತ್ನಾಳ, ರಮೇಶ ಜಾರಕಿಹೊಳಿ, ಆರ್‌.ಅಶೋಕ, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಬಿಎಸ್ ವಿಜಯೇಂದ್ರ ನಾಯಕತ್ವ ಒಪ್ಪಿಕೊಂಡಿಲ್ಲ. ಆದ್ದರಿಂದ ಅವರ ಗಾಡಿ ಬಹಳ ದಿನ ಓಡೋದಿಲ್ಲ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ದೂರಿದರು.

ತಮ್ಮ ಸ್ಥಾನವೇ ಅಲುಗಾಡುತ್ತಿರುವಾಗ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ತಪ್ಪಿಲ್ಲ ಎಂಬುದು ನಮಗೆ ಖಾತ್ರಿಯಾಗಿದೆ. ನ್ಯಾಯಾಲಯವೂ ಪ್ರಕರಣ ಪಕ್ಕಕ್ಕಿರಿಸಲಿದೆ. ಆಗ ಬಿಜೆಪಿಯರು ಪೇಚಾಟಕ್ಕೆ ಸಿಲುಕುತ್ತಾರೆ. ಸಿದ್ದರಾಮಯ್ಯ ಮತ್ತಷ್ಟು ಪ್ರಬಲ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಇನ್ನೊಬ್ಬ ದಲಿತ ನಾಯಕನ್ನೇ ಎತ್ತಿಕಟ್ಟಿದೆ. ಹೀಗೆ ಒಂದು ಸಮಾಜವನ್ನು ತುಳಿಯಲಿ ಅದೇ ಸಮಾಜದ ನಾಯಕರನ್ನು ಎತ್ತಿಕಟ್ಟುವುದು ಬಿಜೆಪಿ, ಆರ್‌ಎಸ್‌ಎಸ್‌ ಅಜೆಂಡ. ಲಿಂಗಾಯತ ನಾಯಕರನ್ನೇ ಎತ್ತಿಕಟ್ಟಿ ಯಡಿಯೂರಪ್ಪ ಅವರನ್ನು ಬಲಿ ಕೊಟ್ಟಿದ್ದು ಇದೇ ತಂತ್ರದಿಂದ ಎಂದು ದೂರಿದರು.

ಛಲವಾದಿ ನಾರಾಯಣಸ್ವಾಮಿ ಅವರಿಗೆ ನಾನು ಅವಮಾನ ಮಾಡಿಲ್ಲ. ಅವರು ಮೈಸೂರು ಬಳಿ ಸಾಫ್ಟ್‌ವೇರ್‌ ತಂತ್ರಜ್ಞಾನ ಅಭಿವೃದ್ಧಿಪಡಿಸಲು 8029 ಚದರ್‌ ಮೀಟರ್ ಭೂಮಿ ಪಡೆದಿದ್ದಾರೆ. ಅಲ್ಲಿ ಶೆಡ್‌ ಮಾತ್ರ ಕಟ್ಟಿರುವುದರಿಂದ ನಾನು ಶೆಡ್ ಗಿರಾಕಿ ಎಂದಿದ್ದೇನೆ ಅಷ್ಟೇ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕೋರಿ ಸಲ್ಲಿಸಿದ್ದ ಮೂರು ಅರ್ಜಿ ವಜಾ