Publish Date: Sat, 04 Apr 2026 (18:51 IST)
Updated Date: Sat, 04 Apr 2026 (18:55 IST)
ಬೆಂಗಳೂರು: ರಾಜ್ಯದಲ್ಲಿ ಎದುರಿಸುತ್ತಿರುವ ಅಡುಗೆ ಅನಿಲ, ಆಟೋ ಗ್ಯಾಸ್ ಸಮಸ್ಯೆಗೆ ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಆಟೋ ಚಾಲಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ್ದೇವೆ. ಅಡುಗೆ ಅನಿಲ ಸಮಸ್ಯೆಯಿಂದ ಹೋಟೆಲ್‌ನವರಿಗೆ ತೊಂದರೆಯಾಗುತ್ತಿದೆ.
ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಕೂಡಲೇ ಕೇಂದ್ರ ಸರ್ಕಾರ ಇದಕ್ಕೆಲ್ಲ ಪರಿಹಾರ ನೀಡಬೇಕೆಂದರು.
ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತೆ ಮಾಡಬೇಕಾಗಿತ್ತು ಆದರೆ ಇದರಲ್ಲಿ ಕೇಂದ್ರ ಸರ್ಕಾರ ವಿಫಲತೆಯಾಗಿದೆ.
ಈ ಬಗ್ಗೆ ಬಿಜೆಪಿಯವರು , ನಮ್ಮಿಂದ ತೊಂದರೆಯಾಗಿದ್ದರೆ, ನಮ್ಮನ್ನ ಕ್ಷಮಿಸಿ ಎಂದು ಹೇಳಬೇಕು. ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ವಾತಾವರಣ ಚೆನ್ನಾಗಿದೆ. ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.