Select Your Language

Notifications

webdunia
webdunia
webdunia
webdunia

ಇವರೇನು ಬೇರೆ ಗ್ರಹದಿಂದ ಬಂದವರಲ್ಲ, ನಮ್ಮವರೇ: ಸಿಎಂ ಸಿದ್ದರಾಮಯ್ಯ

CM Siddaramaiah

Sampriya

ಬೆಂಗಳೂರು , ಮಂಗಳವಾರ, 28 ಅಕ್ಟೋಬರ್ 2025 (15:03 IST)
ಬೆಂಗಳೂರು: ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿ ಮಾಡುವುದಾಗಿದ್ದು, ಇದು ಪೊಲೀಶ್ ಇಲಾಖೆಯ ಗುರಿಯೂ ಆಗಬೇಕು. ಹೀಗಾದ್ದಲ್ಲಿ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸುತ್ತದೆ ಎಂದು ಸಿಎಮ ಸಿದ್ದರಾಮಯ್ಯ ಹೇಳಿದರು. 

ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ , ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. 

ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಕರೆ ನೀಡಿದರು.

ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿಯನ್ನು ಪೊಲೀಸರು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ.

ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ ಎಂದು ಕಿವಿ ಮಾತು ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಗೆ ಹೊಸ ಟೋಪಿ ಹಾಕಿದ ಡಿಕೆ ಶಿವಕುಮಾರ್: ಇನ್ಮುಂದೆ ಈ ಸಮಸ್ಯೆಯೇ ಇಲ್ಲ ಎಂದರು