Webdunia - Bharat's app for daily news and videos

Install App

ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ

Sampriya
ಗುರುವಾರ, 22 ಆಗಸ್ಟ್ 2024 (15:56 IST)
ಬೆಂಗಳೂರು: ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆ ವಿರೋಧಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ರಾಜ್ಯಪಾಲರು ದಲಿತ ಎಂಬ ಕಾರಣಕ್ಕೆ ಅವರನ್ನು ತುಳಿಯಲು ನೋಡುತ್ತಿದೆ ಎಂದು ಗಂಭೀರ ಆರೋಪ ಮಾಡಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಅವರು,  ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ 'ಸಂಘಿ ಮನಸ್ಸು' ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದರು.

ಪೋಸ್ಟ್‌ನಲ್ಲಿ ಹೀಗಿದೆ:  ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ 'ಸಂಘಿ ಮನಸ್ಸು' ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ.

ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ಬಿಜೆಪಿ  ನಾಯಕರಿಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments