Select Your Language

Notifications

webdunia
webdunia
webdunia
webdunia

ಮನೆಯಲ್ಲಿದ ಚಿನ್ನಾಭರಣ ದೋಚಿ ಕಳ್ಳರು ಪರಾರಿ

ಮನೆಯಲ್ಲಿದ ಚಿನ್ನಾಭರಣ ದೋಚಿ ಕಳ್ಳರು ಪರಾರಿ
ಮಂಡ್ಯ , ಮಂಗಳವಾರ, 26 ಸೆಪ್ಟಂಬರ್ 2023 (16:45 IST)
ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಂತಕರು ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚಾಮಲಾಪುರ ಗೇಟ್ ಬಳಿ ನಡೆದಿದೆ.. ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ ಮನೆಗೆ ನುಗ್ಗಿ ಮನೆಯಲ್ಲಿದ್ದವರ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಗ್ರಾಮದ ಮಂಜುನಾಥ್ ಎಂಬುವರ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಲಾಗಿದೆ. ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಮಂಜುನಾಥ್, ಆಶಾ, ಪುತ್ರಿ ಅಮೂಲ್ಯ ಹಾಗೂ ತಂದೆ, ತಾಯಿ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಎಂ ಆಯ್ಕೆ ಹೈಕಮಾಂಡ್​ಗೆ ಬಿಟ್ಟದ್ದು