Publish Date: Fri, 18 Aug 2023 (21:01 IST)
Updated Date: Fri, 18 Aug 2023 (21:08 IST)
ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗಿದೆ.23ನೇ ತಾರೀಕು ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುವುದಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಐದಾರು ಸಾವಿರ ಜನರು ಸೇರಿ ಪ್ರತಿಭಟನೆ ಮಾಡುತ್ತೇವೆ.ಈ ಸರ್ಕಾರ ಪಾಪರ್ ಆಗಿದೆ.ಎಲ್ಲ ಕೆಲಸ ಕಾರ್ಯಗಳೂ ಸ್ಥಗಿತವಾಗಿವೆ.ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎನುತ್ತಲೇ ಬು ಎಸ್ ವೈ ಸುಳಿವು ನೀಡಿದ್ದಾರೆ.ಯಾರೂ ಪಕ್ಷ ಬಿಟ್ಟು ಹೋಗಲ್ಲ.ಒಬ್ಬಿಬ್ಬರು ಈ ಬಗ್ಗೆ ಯೋಚಿಸುತ್ತಿದ್ದಾರೆ,ಅದರ ಬಗ್ಗೆ ಮಾತಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ