Webdunia - Bharat's app for daily news and videos

Install App

ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್: ಎಚ್ ಡಿ ಕುಮಾರಸ್ವಾಮಿ

Sampriya
ಮಂಗಳವಾರ, 23 ಜುಲೈ 2024 (18:01 IST)
Photo Courtesy X
ಬೆಂಗಳೂರು: ಸತತ 7ನೇ ಬಜೆಟ್ ಮಂಡಿಸಿದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೃದಯಪೂರ್ವಕ ಅಭಿನಂದನೆಗಳು ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ, ಮಹಿಳೆಯರಿಗೆ ಅತಿಹೆಚ್ಚು ಅನುಕೂಲ ಮಾಡಿಕೊಡುವ ನಾರಿಶಕ್ತಿ ಬಜೆಟ್ ಇದಾಗಿದೆ. 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದೆ. ಆ ಪೈಕಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ ಅನುದಾನ ನೀಡಿ 4 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಮಾನವ ಸಂಪನ್ಮೂಲ ಸದ್ಬಳಕೆಗೆ ಆದ್ಯತೆ ಕೊಡಲಾಗಿದೆ. ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಣ್ಣ, ಮಧ್ಯಮ ಗಾತ್ರದ ಕೈಗಾರಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಉಪಕ್ರಮ ಈ ಬಜೆಟ್ ನಲ್ಲಿದೆ.

•ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ. ಉತ್ಪಾದನೆಗೂ ಗಮನ ಕೊಡಲಾಗಿದೆ.  ಬೆಂಗಳೂರು - ಚೆನ್ನೈ, ಹೈದರಾಬಾದ್ -ಬೆಂಗಳೂರು, ಬೆಂಗಳೂರು ಸೇರಿ ಒಟ್ಟು 12 ಕೈಗಾರಿಕಾ ಕಾರಿಡಾರ್ ಗಳನ್ನು ಘೋಷಣೆ ಮಾಡುವುದು ಉದ್ಯೋಗ, ಆರ್ಥಿಕ ವೃದ್ಧಿಗೆ ಬೃಹತ್ ಕೊಡುಗೆ ನೀಡಲಿದೆ.

•ಹೆಚ್ಚುತ್ತಿರುವ ಆಹಾರ ಬೇಡಿಕೆಯ ಪೂರೈಕೆ ಹಾಗೂ ಕೃಷಿಗೆ ಮತ್ತಷ್ಟು ಚೈತನ್ಯ ತುಂಬಲು ಕೃಷಿ ಸಂಶೋಧನೆ & ಅಭಿವೃದ್ಧಿಗೆ ಬಿಜೆಟ್ ಆದ್ಯತೆ ಕೊಟ್ಟಿದೆ. ಕೃಷಿ ಬೆಳೆಯ ಡಿಜಿಟಲ್ ಸಮೀಕ್ಷೆ ಮಾಡುವ ಯೋಜನೆಯನ್ನು ದೇಶದ 400 ಜಿಲ್ಲೆಗಳಿಗೆ ವಿಸ್ತರಿಸುವುದು ಸ್ವಾಗತಾರ್ಹ. ಮೇಲಾಗಿ ಸಹಜ ಕೃಷಿಗೆ ವಿತ್ತ ಸಚಿವರು ಪ್ರಾಮುಖ್ಯತೆ ನೀಡಿದ್ದಾರೆ.

•ಸಂಶೋಧನೆ, ಆವಿಷ್ಕಾರಕ್ಕೆ ಬಜೆಟ್ ಅತಿಹೆಚ್ಚು ಒತ್ತು ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪರಸ್ಪರ ಸಹಯೋಗದಿಂದ ಕೈಗಾರಿಕಾಭಿವೃದ್ಧಿಗೆ ಆದ್ಯತೆ ನೀಡುವುದು ಅಭಿವೃದ್ಧಿಗೆ ದೂರಗಾಮಿ ಕೊಡುಗೆ ನೀಡುವ ಉಪಕ್ರಮವಾಗಿದೆ. ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎನ್ನುವುದು ನನ್ನ ಭಾವನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments