ವಿಜಯಪುರ -ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಹಿಂದೂ ವಿರೋಧಿ ನಿಲುವು ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕಿಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಾಂಗ್ರೆಸ್ ಡೋಂಗಿ ಜಾತ್ಯತೀತವಾದಕ್ಕೆ ಇದು ಹಿಡಿದ ಕೈಗನ್ನಡಿ ಎಂದಿದ್ದಾರೆ.
									
			
			 
 			
 
 			
			                     
							
							
			        							
								
																	ಈ ಬಗ್ಗೆ ಟ್ವೀಟ್ ಮಾಡಿದ ಯತ್ನಾಳ್, ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ, ಹಿಂದೂ ವಿರೋಧಿ ನಿಲುವು ಏನೆಂದು ತಿಳಿಯುವುದಕ್ಕೆ ಇದಕ್ಕಿಂತ ಉತ್ತಮವಾದ ಉದಾಹರಣೆ ಬೇಕಿಲ್ಲ. ಇಡೀ ದೇಶದಲ್ಲೇ ಹಬ್ಬದ ವಾತಾವರಣವಿರಬೇಕಾದರೆ, ಕ್ಷುಲ್ಲಕ ರಾಜಕಾರಣಕ್ಕೆ ಇವರು ಶ್ರೀ ರಾಮ ದೇವರ ಪ್ರಾಣಪ್ರತಿಷ್ಠಾಪನೆಯ ಆಮಂತ್ರಣವನ್ನು ತಿರಸ್ಕರಿಸುವುದು ಇವರ ಡೋಂಗಿ ಜಾತ್ಯತೀತವಾದಕ್ಕೆ ಹಿಡಿದ ಕೈಗನ್ನಡಿ. ಶ್ರೀ ರಾಮನು ಇವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದರು.