Publish Date: Tue, 05 May 2020 (14:53 IST)
Updated Date: Tue, 05 May 2020 (14:55 IST)
ಲಾಕ್ ಡೌನ್ ಸಡಿಲಿಕೆ ನಂತರ ಹೋಟೆಲ್ ಗಳು ಈ ಜಿಲ್ಲೆಯಲ್ಲಿ ಆರಂಭಗೊಂಡಿವೆ.
ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಕಲ್ಪಿಸಲಾಗಿದೆ.
ಕೊವೀಡ್ -19 ಪ್ರಕರಣಗಳು ಪತ್ತೆಯಾದ ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಧಾರವಾಡ ಜಿಲ್ಲೆ ಹಾಗೂ ಹುಬ್ಬಳ್ಳಿ-ಧಾರವಾಡ ನಗರ ಪ್ರದೇಶದ ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಕಲ್ಪಿಸಲಾಗಿದೆ.
ಬೆಳಿಗ್ಗೆ 07 ರಿಂದ ಸಂಜೆ 07 ರವರೆಗೆ ಹೋಟೆಲ್ ಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಗ್ರಾಹಕರು ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೊಗಬಹುದು. ಹೀಗಂತ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ಯಮ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.