Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಸತೀಶ ಜಾರಕಿಹೊಳಿ ಹೀಗೇ ಹೇಳಿದ್ರು

Chief Minister Siddaramaiah

Sampriya

ಬೆಳಗಾವಿ , ಮಂಗಳವಾರ, 24 ಸೆಪ್ಟಂಬರ್ 2024 (18:22 IST)
Photo Courtesy X
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಪರ ಕಾಂಗ್ರೆಸ್‌ ಹೈ ಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಬೆನ್ನಿಗೆ ನಿಂತಿದ್ದೇವೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ಬಿಜೆಪಿ ಮಾಡುತ್ತಿರುವ ಒತ್ತಾಯಕ್ಕೆ ಯಾವುದೇ ಅರ್ಥವಿಲ್ಲ. ಹೈಕೋರ್ಟ್‌ ತನಿಖೆಗೆ ಅವಕಾಶ ನೀಡಿ ಆದೇಶ ನೀಡಿದೆ. ತನಿಖೆಯಲ್ಲಿ ತಪ್ಪು ಕಂಡು ಬಂದರೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ಮುಡಾ ಪ್ರಕರಣ ತನಿಖೆಯಾಗುವವರೆಗೂ ಸಿಎಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.

ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೇ ಗೊತ್ತಾಗುತ್ತಿದೆ. ಈ ಹಿಂದಿನ ಯಾವುದೇ ರಾಜ್ಯಪಾಲರು ಈ ರೀತಿ ಸರ್ಕಾರದ ವಿರುದ್ಧ ಧೋರಣೆ ಹೊಂದಿರಲಿಲ್ಲ. ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳ ಮೂಲಕ, ರಾಜ್ಯಪಾಲರುಗಳ ಮೂಲಕ ಕಾಂಗ್ರೆಸ್ ಶಕ್ತಿ ಕುಂದಿಸುವ ಹುನ್ನಾರ ಮುಂದುವರಿಸಿದೆ ಎಂದು ಗಂಭೀರ ಆರೋಪ ಮಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಬಿದ್ದಿದೆ: ಆರ್‌ ಅಶೋಕ್