Daily Horoscope

Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ದಿಢೀರ್ ಅನುಕಂಪ ಶುರುವಾಗಿದ್ದು ಈ ಕಾರಣಕ್ಕೆಂದಾ ಕುಮಾರಸ್ವಾಮಿ

HD Kumaraswamy
ಮಂಡ್ಯ: ರಾಜ್ಯಸಭೆ ಟಿಕೆಟ್‌‌ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ. ಆದರೆ ಕಾಂಗ್ರೆಸ್‌ ನಾಯಕರಿಗೆ ಗೌಡರ ಬಗ್ಗೆ ಅತಿಯಾದ ಅನುಕಂಪ ಶುರುವಾಗಿದ್ದು. ಇದೆಲ್ಲ ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಹಳ್ಳಿ ಗ್ರಾಮದಲ್ಲಿ ಸಿಎಸ್ಆರ್ ನಿಧಿ ಅನುದಾನದಿಂದ ನೂತನವಾಗಿ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳನ್ನು ಮಂಗಳವಾರ ಉದ್ಘಾಟಿಸಿದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಹೋರಾಟದ ಬದುಕಾಗಿರುವ ದೇವೇಗೌಡ ಅವರು ಯಾವತ್ತೂ ಅಧಿಕಾರಕ್ಕಾಗಿ ಹಪಾಹಪಿಸಿದವರಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದರು. ಅದೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ಲವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕಳೆದ ಬಾರಿ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇರಲಿಲ್ಲ. ನಮ್ಮ ಪಕ್ಷಕ್ಕೆ ಸಂಖ್ಯಾಬಲ ಇತ್ತು. ಹೀಗಾಗಿ ರಾಜ್ಯಸಭೆಗೆ ದೇವೇಗೌಡರು ಆಯ್ಕೆಯಾದರು. ಅವರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ ಎಂದು ಕೌಂಟರ್ ಕೊಟ್ಟರು.

ಮಾಜಿ ಸಚಿವ ಜಮೀರ್ ಅಹಮದ್ ಖಾನ್‌ ಅವರು ನನ್ನ ಜತೆ ಸಂಪರ್ಕ ಹೊಂದಿಲ್ಲ. ಕಾಂಗ್ರೆಸ್‌ನ ಯಾವ ನಾಯಕರ ಜತೆಯೂ ನಾನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ, ಭಾರೀ ಕುತೂಹಲ