ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದ್ದಾರೆ..ಈ ವೇಳೆ ಮಾತನಾಡಿದ ಮುರ್ಮು, ರಾಷ್ಟ್ರಪತಿ ಹುದ್ದೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ..ನನ್ನ ಆಯ್ಕೆಯು ಭಾರತದಲ್ಲಿನ ಬಡವರು ಬರೀ ಕನಸು ಕಾಣುವುದು ಮಾತ್ರವಲ್ಲ, ಅದನ್ನ ನನಸು ಮಾಡಿಕೊಳ್ಳಬಹುದು ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮುರ್ಮು ತಮ್ಮ ಮೊದಲ ಭಾಷಣದಲ್ಲಿ ಹೇಳಿದ್ರು.. ಎಲ್ಲಾ ಭಾರತೀಯರ ನಿರೀಕ್ಷೆಗಳು, ಆಕಾಂಕ್ಷೆಗಳು ಮತ್ತು ಹಕ್ಕುಗಳ ಸಂಕೇತ ಈ ಸಂಸತ್ತು. ನಾನು ನಿಮ್ಮೆಲ್ಲರಿಗೂ ವಿನಮ್ರವಾಗಿ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ಹೊಸ ಜವಾಬ್ದಾರಿಯನ್ನು ನಿರ್ವಹಿಸಲು ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ ಎಂದರು. ವರ್ಷಗಟ್ಟಲೇ ಅಭಿವೃದ್ಧಿ ಕಾಣದ ಜನರು-ಬಡವರು, ದಲಿತರು, ಹಿಂದುಳಿದವರು, ಗಿರಿಜನರು ನನ್ನನ್ನು ತಮ್ಮ ಪ್ರತಿಬಿಂಬವಾಗಿ ನೋಡುತ್ತಾರೆ ಎಂಬ ತೃಪ್ತಿ ನನಗೆ. ನನ್ನ ಆಯ್ಕೆಯ ಹಿಂದೆ ಬಡವರ ಆಶೀರ್ವಾದವಿದೆ, ಇದು ಕೋಟಿಗಟ್ಟಲೇ ಮಹಿಳೆಯರ ಕನಸುಗಳು & ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ ಎಂದು ಹೇಳಿದರು.