ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

Sampriya
ಮಂಗಳವಾರ, 20 ಮೇ 2025 (17:34 IST)
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ₹1600 ಕೋಟಿ ಹಣವನ್ನು ಬಿಡುಗಡೆ ಮಾಡಿದೆ.  ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಇದೀಗ ಆ ಕಾಮಗಾರಿಗಳು ನಡೆದಿದ್ದರೆ ಇಂದು ಬೆಂಗಳೂರಿಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಕಿಡಿಕಾರಿದರು.

ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ  ಅಧಿಕಾರದಲ್ಲಿರುವ  ಕಾಂಗ್ರೆಸ್ ಸರ್ಕಾರ ಕಳೆದ 2 ವರ್ಷದಿಂದ ಏನ್ ಮಾಡ್ತಾ ಇದೆ. ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ ಎಂದರು.

ಮಳೆಯಿಂದ ನಡೆದ ದುರ್ಘಟನೆಯಿಂದಾಗಿ 5 ಜನ ಸಾವನ್ನಪ್ಪಿದ್ದಾರೆ. ಇದೀಗ ಸಾವಿನ ಮುಂದೆ ಕಾಂಗ್ರೆಸ್ ಸಾಧನಾ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments