Select Your Language

Notifications

webdunia
webdunia
webdunia
webdunia

ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ

This time BJP will come back to power
bangalore , ಗುರುವಾರ, 27 ಏಪ್ರಿಲ್ 2023 (21:15 IST)
ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೊ‌ ಅಷ್ಟೇ ಸತ್ಯ ಈ ಬಾರಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮೋದಿ ಸಂವಾದದ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಹೇಳಿಕೆ ನೀಡಿದರು. ಇನ್ನೂ ಎರಡು ಮೂರು ದಿನಗಳಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ. ರಾಜ್ಯದ ಜನರು ಸಾಕಷ್ಟು ಅಪೇಕ್ಷೆಗಳನ್ನ ಇಟ್ಟುಕೊಂಡಿದ್ದರೆ ಅವರ ಅಪೇಕ್ಷೆಯನ್ನು ನಾವೂ ನೇರೆವೆರಿಸುತ್ತೇವೆ ಎಂದರು. ಮೋದಿಯವರ ಬಗ್ಗೆ ರಾಜ್ಯದ ಜನತೆ ಆಘಾದ ಗೌರವ ಇಟ್ಟುಕೊಂಡಿದ್ದಾರೆ. ಈ ಬಾರಿ ನಿಶ್ಚಿತವಾಗಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು. ಕಾಂಗ್ರೆಸ್ ಸುಳ್ಳು ಭರವಸೆ ನೀಡುವುದು ಬಿಡಬೇಕು. ಡಿಕೆಶಿ ಹಾಗೂ ಸಿದ್ಧರಾಮಯ್ಯ ಸುಳ್ಳು ಭರವಸೆಗಳನ್ನ ನೀಡುವ ಮೂಲಕ ಜನರಿಗೆ ಮೋಸ ಮಾಡುತ್ತಿದ್ದಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ರು. ಪ್ರತಿ ಬೂತ್​​ನಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ‌ ಮಾಡಲಾಗುತ್ತಿದೆ. ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಿದಲ್ಲಿ 150 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ. ಜನರ ಆಶೀರ್ವಾದ ಬಿಜೆಪಿ ಮೇಲಿದ್ದು, ಮೋದಿಯವರ ಈ ಸಂವಾದ ಕಾರ್ಯಕರ್ತರಲ್ಲಿ ಬೂಸ್ಟರ್ ಡೋಸ್ ನೀಡಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ ದೇವೇಗೌಡರಿಂದ ಪ್ರಚಾರ