Publish Date: Mon, 14 May 2018 (16:32 IST)
Updated Date: Mon, 14 May 2018 (16:35 IST)
ಬೆಂಗಳೂರು : ಬಿಜೆಪಿ 125-130 ಸ್ಥಾನಗಳನ್ನು ಗೆಲ್ಲುವುದು ಖಚಿತ, ನಾವೇ ಈ ಬಾರಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಮತದಾನ ಮಾಡಿದ ರಾಜ್ಯದ ಜನತೆಗೆ ವಿನಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನತೆ ಈ ಬಾರಿ ಪರಿವರ್ತನೆಗಾಗಿ ಮತ ಚಲಾಯಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ನಮಗೆ ಪೂರಕ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಎರಡು ದಿನ ಕಾರ್ಯಕರ್ತರನ್ನು ಭೇಟಿ ಮಾಡಿ ವರದಿ ಪಡೆದುಕೊಂಡು ಮೇ. 15 ರಂದು ದೆಹಲಿಗೆ ಹೋಗಿ 17 ರಂದು ಪ್ರಮಾಣ ವಚನಕ್ಕೆ ದಿನಾಂಕ ನಿಗದಿ ಮಾಡಿಕೊಂಡು ಬರುತ್ತೇನೆ’ ಎಂದು ಹೇಳಿದ್ದಾರೆ.
ಹಾಗೇ ‘ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನ ಕ್ಷಮಿಸೊಲ್ಲ, ಹೀಗಾಗಿ ಕಾಂಗ್ರೆಸ್ 70 ಸೀಟ್ ಗಿಂತ ಹೆಚ್ಚು ಗೆಲ್ಲುವುದಿಲ್ಲ. ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ 20-25 ಸೀಟ್ ಬರಬಹುದು. ನಮಗೆ 130 ಕ್ಷೇತ್ರಗಳಲ್ಲಿ ಗೆಲುವು ಖಂಡಿತ. ಬೇಕಾದ್ರೆ ಯಾವ ಯಾವ ಕ್ಷೇತ್ರಗಳು ಎಂದು ಹೇಳಬಲ್ಲೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ