Select Your Language

Notifications

webdunia
webdunia
webdunia
webdunia

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು , ಗುರುವಾರ, 8 ನವೆಂಬರ್ 2018 (15:00 IST)
ಬೆಂಗಳೂರು : ವಿರೋಧದ ನಡುವೆಯೂ ಈ ವರ್ಷವು ಕೂಡ ಟಿಪ್ಪು ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್, ಟಿಪ್ಪು ಜಯಂತಿ ಆಚರಣೆ ಸ್ಥಳದ ವಿಚಾರದಲ್ಲಿ ಗೊಂದಲ ಇದೆ. ಕಳೆದ ಮೂರು ವರ್ಷದಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿಯೇ ಆಚರಿಸಲಾಗುತ್ತಿದೆ. ಸಿದ್ದರಾಮಯ್ಯ ಅವರ ಬಳಿ ಇದೆ ವಿಚಾರ ಮಾತನಾಡಿದ್ದೇನೆ. ಅವರು ವಿಧಾನಸೌಧದದ‌ಲ್ಲಿಯೇ ಮಾಡುವಂತೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾರೊಂದಿಗೆ ಸೇರಿ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನೂ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಟಿಪ್ಪು ಜಯಂತಿ ಆಚರಿಸಲು ವಿಧಾನಸೌಧವೇ ಸುರಕ್ಷಿತ ಪ್ರದೇಶವಾಗಿದೆ. ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಾರೆ. ಇದರಲ್ಲಿ ರಾಜಕೀಯ ಮಾಡುವುದು ಬೇಡ. ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿಯವರೂ ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜನಾರ್ಧನ ರೆಡ್ಡಿ ಅವರಿಗೂ ಬಿಜೆಪಿಗೆ ಸಂಬಂಧವಿಲ್ಲ ಎಂದರೆ ಜನ ನಂಬಲ್ಲ- ಮಾಜಿ ಶಾಸಕ ತಿಪ್ಪೇಸ್ವಾಮಿ