Webdunia - Bharat's app for daily news and videos

Install App

ತೊಕ್ಕೊಟ್ಟು ಫ್ಲೈ ಓವರ್ ಸಂಚಾರ ಆರಂಭ; ಅವ್ಯವಸ್ಥೆ ಸರಿಪಡಿಸಿ

Webdunia
ಗುರುವಾರ, 13 ಜೂನ್ 2019 (13:43 IST)
ಹಲವು ವರ್ಷಗಳ ನಿಧಾನಗತಿಯ ಕಾಮಗಾರಿಯ ನಂತರ ತೊಕೊಟ್ಟು ಫ್ಲೈ ಓವರ್ ಕೆಲಸ ಪೂರ್ಣಗೊಂಡಿದ್ದು ಇಂದಿನಿಂದ ಅದರಲ್ಲಿ ವಾಹನ ಸಂಚಾರ ಆರಂಭವಾಗಿದ್ದರೂ ಆದರೆ ಅವ್ಯವಸ್ಥೆ ತಾಂಡವವಾಡುತ್ತಿದೆ.  

ಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ವಾಹನಗಳಿಗೆ ತಿರುವು ಕೊಡುವ ಬಗ್ಗೆ ಸಮರ್ಪಕ ವ್ಯವಸ್ಥೆ ಮಾಡದಿರುವ ಕಾರಣ ಅಪಘಾತದ ಸಾಧ್ಯತೆಗಳು ಹೆಚ್ಚಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಗಮನಹರಿಸಿ ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಹೋಗಲು ಸಮರ್ಪಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಉಳ್ಳಾಲ ವಲಯ ಡಿವೈಎಫ್‍ಐ ಒತ್ತಾಯಿಸಿದೆ .

ಈ ಭಾಗದ ವಾಹನ ಸವಾರರ ಬಹುದಿನಗಳ ಬೇಡಿಕೆಯಾದ ತೊಕ್ಕೊಟ್ಟು ಫ್ಳೈ ಓವರ್ ಕಾಮಗಾರಿ ಪೂರ್ಣಗೊಳಿಸುವಂತೆ ಡಿವೈಎಫ್‍ಐ ಸಂಘಟನೆ ಹಲವು ಹೋರಾಟಗಳನ್ನು ನಡೆಸಿತ್ತು. ಈ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ನಾಗರೀಕರಿಗೂ ಸಂಘಟನೆ ಅಭಿನಂದನೆ ಸಲ್ಲಿಸುತ್ತದೆ. ಫ್ಳೈ ಓವರ್ ಪೂರ್ಣಗೊಂಡಿದ್ದರೂ ಅವೈಜ್ಞಾನಿಕ ರೀತಿಯ ಕಾಮಗಾರಿಗಾಗಿ ಫ್ಲೈ ಓವರ್ ನಿರ್ಮಿಸಿದ ನವಯುಗ ಸಂಸ್ಥೆ , ಯೋಜನೆಯ ಬಗ್ಗೆ ಅರಿವಿದ್ದರೂ ಇದರ ಅವೈಜ್ಞಾನಿಕ ನೀಲನಕ್ಷೆಯ ಬಗ್ಗೆ ಚಕಾರ ಎತ್ತದ ಸಂಸದರು ಹಾಗೂ ಈ ಭಾಗದ ಶಾಸಕರು ನೇರ ಹೊಣೆಯಾಗಿದ್ದಾರೆ.

ಈಗ ಕಾಮಗಾರಿ ಪೂರ್ಣಗೊಂಡ ನಂತರ ಇಲ್ಲಿನ ಶಾಸಕರು , ಸಚಿವರೂ ಆದ ಯು.ಟಿ ಖಾದರ್ ಈ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಹೇಳಿಕೆ ನೀಡುತ್ತಿರುವುದು ಕೇವಲ ಒಂದು ರಾಜಕೀಯ ಗಿಮಿಕ್ ಆಗಿದೆ. ಪ್ರತಿದಿನ ತಾವು ಒಡಾಡುವ ರಸ್ತೆಯ ಮಧ್ಯದಲ್ಲೆ ಈ ಕಾಮಗಾರಿ ನಡೆಯುತ್ತಿದ್ದರೂ ಇಷ್ಟು ದಿನ ಸುಮ್ಮನೇ ಇದ್ದು ಈಗ ಏಕಾಏಕಿ ಇಂತಹ ಹೇಳಿಕೆ ಕೊಟ್ಟು ರಾಜಕೀಯ ಲಾಭ ಪಡೆಯುವ ಬದಲು ಈ ಅವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಬೇಕೆಂದು ಡಿವೈಎಫ್‍ಐ ಉಳ್ಳಾಲ ವಲಯ ಕಾರ್ಯದರ್ಶಿ ರಝಾಕ್ ಮೊಂಟೆಪದವು ಒತ್ತಾಯಿಸಿದ್ದಾರೆ .


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments