Select Your Language

Notifications

webdunia
webdunia
webdunia
webdunia

ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ : ರಮೇಶ್ ಕುಮಾರ್

ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ : ರಮೇಶ್ ಕುಮಾರ್
ಕೋಲಾರ , ಶನಿವಾರ, 6 ಮೇ 2023 (11:54 IST)
ಕೋಲಾರ : ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.

7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. 


Share this Story:

Follow Webdunia kannada

ಮುಂದಿನ ಸುದ್ದಿ

ಬೇರೆಯವರನ್ನು ಮದ್ವೆಯಾಗಲು ಓಡಿಹೋದ 4 ಮಕ್ಕಳ ತಾಯಿ : ಮುಂದೇನಾಯ್ತು ?