Webdunia - Bharat's app for daily news and videos

Install App

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

Sampriya
ಮಂಗಳವಾರ, 1 ಜುಲೈ 2025 (20:34 IST)
ಮಂಡ್ಯ: ಸಿದ್ದರಾಮಯ್ಯನವರೇ ನೀವು ಮಾತೃಪಕ್ಷಕ್ಕೆ ಮೋಸ ಮಾಡಿ ಹೋಗಿರುವುದನ್ನು ನೆನಪಿನಲ್ಲಿಡಿ. ಇದು ಹೆತ್ತ ತಾಯಿಗೆ ದ್ರೋಹ ಬಗೆದ ಹಾಗೇ. ನೀವು ಇಲ್ಲಿ ಉಂಡು, ತಿಂದು ಹೋದವರು ಇದೀಗ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತೀರಾ. ನಮ್ಮ ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿಯಾಗಿದ್ದು, ನಾವು ಧೃತಿಗೆಡುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. 

‘ಜೆಡಿಎಸ್‌ ಬೇರೆಯವರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು’ ಎಂದು ಸಿದ್ದರಾಮಯ್ಯ ಅವರು ಕೆಆರ್‌ಎಸ್‌ ಬಾಗಿನ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೆ.ಆರ್‌. ಪೇಟೆಯಲ್ಲಿ ಮಂಗಳವಾರ ನಡೆದ ಜೆಡಿಎಸ್‌ ಡಿಜಿಟಲ್‌ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್‌ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

‘ಯಾರೋ ಕಟ್ಟಿದ ಪಕ್ಷದಲ್ಲಿ ನೀವು ಹೋಗಿ ಕಾಂಗ್ರೆಸ್‌ ಮುಖಂಡರಿಗೆ ಅಧಿಕಾರ ತಪ್ಪಿಸಿದ್ರಿ. ತಮ್ಮ ಅಧಿಕಾರದ ಆಸೆಯಿಂದ ಹಲವು ದಲಿತ ನಾಯಕರನ್ನು ತುಳಿದಿದ್ದೀರಿ. ನಮ್ಮ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುತ್ತೀರಾ, ನಮ್ಮ ಕಾರ್ಯಕರ್ತರು ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಇದು ನಮ್ಮ ತಾತನ (ಎಚ್‌.ಡಿ. ದೇವೇಗೌಡ) ಬಯಕೆ’ ಎಂದರು.

‘ಮುಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ₹2 ಸಾವಿರ ಅಲ್ಲ, ₹5 ಸಾವಿರ ಕೊಡುತ್ತೇವೆ. ನಾವು ರಾಜ್ಯದ ಅಭಿವೃದ್ಧಿಗೆ ಅಡ್ಡಿಯಾಗದಂತೆ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುತ್ತೇವೆ’ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಮುಂದಿನ ಸುದ್ದಿ
Show comments