Select Your Language

Notifications

webdunia
webdunia
webdunia
webdunia

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

Dharmasthala case, Agriculture Minister N. Chaluvarayaswamy, Karnataka BJP

Sampriya

ಮಂಡ್ಯ , ಭಾನುವಾರ, 24 ಆಗಸ್ಟ್ 2025 (16:46 IST)
ಮಂಡ್ಯ: ಎಸ್‌ಐಟಿ ರಚನೆ ಮಾಡಿದಾಗ ಬಾಯಿಮುಚ್ಚಿಕೊಂಡು ಸುಮ್ಮನಿದ್ದ ಬಿಜೆಪಿಯವರು ಈಗ ಲಾಭ ಪಡೆಯೋಕೆ ನೋಡ್ತಿದ್ದಾರೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. 

ಧರ್ಮಸ್ಥಳದ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗ ಆಗಿದೆ. ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ಆರ್‌. ಅಶೋಕ್ ಗೃಹ ಸಚಿವರಾಗಿದ್ದರು. ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾ ಅಪರಾಧ ಎಂದು ಅಶೋಕ್‌ ವಿರುದ್ಧವೂ ಕಿಡಿಕಾರಿದ್ದಾರೆ.

ಧರ್ಮಸ್ಥಳದ ವಿರುದ್ಧ ಆರೋಪ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ವಿಜಯೇಂದ್ರ, ಆರ್‌.ಅಶೋಕ್‌ ಈಗ ಮಾತನಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ಸೌಜನ್ಯ ಹೋರಾಟ ನಡೆಯುವಾಗ ಇವರೆಲ್ಲ ಎಲ್ಲಿ ಹೋಗಿದ್ದರು. ಇವರದೇ ಸರ್ಕಾರವಿತ್ತಲ್ಲಾ ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಕ್ರಮ ಆಗಬೇಕು ಎಂದಾಗ ಬಿಜೆಪಿಯವರಿಗೆ ಜ್ಞಾನೋದಯವಾಗಿದೆ. ಎಸ್‌ಐಟಿ ಮೂಲಕ ನಮ್ಮ ಸರ್ಕಾರ ಸತ್ಯವನ್ನು ಹೊರಗೆ ತಂದಿದೆ. ಇನ್ನು ಮುಂದೆಯಾದರೂ ಬಿಜೆಪಿಯವರು ಧರ್ಮಧ ವಿಚಾರದಲ್ಲಿ ರಾಜಕಾರಣ ಮಾಡೋದನ್ನು ಬಿಡಲಿ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ