ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

Sampriya
ಮಂಗಳವಾರ, 2 ಡಿಸೆಂಬರ್ 2025 (17:15 IST)
Photo Credit X
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳಲ್ಲೂ ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಬಿಗ್ ಶಾಲ್ ಎದುರಾಗಿದೆ. 

ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ.

ಎರಡೂ ಟರ್ಮಿನಲ್‌ಗಳ ಪಿಕಪ್ ವಲಯದಲ್ಲಿ ಎಲ್ಲ ಖಾಸಗಿ ವಾಹನಗಳು (ಬಿಳಿ ಬೋರ್ಡ್) 8 ನಿಮಿಷ ಉಚಿತವಾಗಿ ಬಳಕೆ ಮಾಡಬಹುದು. ಇದಾದ ಬಳಿಕ ಕಾರುಗಳಿಗೆ 8–13ನಿಮಿಷದ ವರೆಗೆ ₹ 150 ಹಾಗೂ 13–18ನಿಮಿಷದವರೆಗೆ ₹300 ಶುಲ್ಕ ವಿಧಿಸಲಿದೆ. ಈ ಮೂಲಕ ಚಾಲಕರ ಜೇಬಿಗೆ ಕತ್ತರಿ ಬೀಳಲಿದೆ. 
ದಂಡದ ಜೊತೆಗೆ ಟೋಯಿಂಗ್ ಶುಲ್ಕವನ್ನೂ ವಸೂಲಿ ಮಾಡಲಾಗುತ್ತದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ವಿವರಿಸಿದೆ. 

ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಎಲೆಕ್ಟ್ರಿಕ್ ಕ್ಯಾಬ್‌ಗಳು ಸೇರಿ ಎಲ್ಲ ವಾಣಿಜ್ಯ ವಾಹನಗಳು ನಿಗದಿಪಡಿಸಿದ ಸ್ಥಳದಲ್ಲಿಯೇ ಪ್ರಯಾಣಿಕರಿಗೆ ಕಾಯಬೇಕು. ನಿಯಮದಂತೆ 10 ನಿಮಿಷ ಉಚಿತವಾಗಿ ಪಾರ್ಕ್ ಮಾಡಬಹುದು. ಟರ್ಮಿನಲ್ ಒಂದಕ್ಕೆ ಬರುವ ವಾಣಿಜ್ಯ ವಾಹನಗಳು P4 ಹಾಗೂ P3 ಪಾರ್ಕಿಂಗ್ ವಲಯಕ್ಕೆ ತೆರಳಬೇಕು. ಟರ್ಮಿನಲ್–2ಕ್ಕೆ ಬರುವ ವಾಹನಗಳು P2 ಪಾರ್ಕಿಂಗ್ ವಲಯಕ್ಕೆ ತೆರಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments