Select Your Language

Notifications

webdunia
webdunia
webdunia
webdunia

ಸಿಟಿ ರವಿಗೆ ಅನ್ಯಾಯವಾಗಿದೆ, ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಹೊರಗಿದ್ದಾರೆ : ಬಿಎಸ್‌ವೈ

BSY

Sampriya

ಚಿಕ್ಕಮಗಳೂರು , ಗುರುವಾರ, 11 ಏಪ್ರಿಲ್ 2024 (17:04 IST)
ಚಿಕ್ಕಮಗಳೂರು: ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಿ.ಟಿ.ರವಿ ಅವರಿಗೆ ಅನ್ಯಾಯ ಆಗಿದ್ದು, ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡಿ ಸರಿ‍ಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮತನಾಡಿದ ಅವರು, ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲೇಬೇಕು ಎಂದು ಯಡಿಯೂರಪ್ಪ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಮುಖಂಡ ಸಿ.ಟಿ.ರವಿ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು  ಅಪಪ್ರಚಾರ ಮಾಡಿತ್ತು, ಇದರಿಂದ ನಾನು ಸೋಲಬೇಕಾಯಿತು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ದುಡಿಯುವ ಎತ್ತಿಗೆ ಮೇವು ಹಾಕಬೇಕು ಎಂಬುದರ ಬಗ್ಗೆ ಜನ ಯೋಚಿಸಿ ಮತ ಹಾಕಬೇಕಿತ್ತು.  ಆದರೆ  ಕಾಂಗ್ರೆಸ್‌ಗೆ ಮತ ಹಾಕಿ ಗೂಟ ಹೊಡೆಸಿಕೊಳ್ಳಬೇಕಾಯಿತು. ಮುಂದೆ ಗೂಟ ಹೊಡೆಸಿಕೊಳ್ಳಬಾರದು ಎಂದಾದರೆ ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯದ ಅಮಲಿನಲ್ಲಿ ಚಾಲನೆ: ಶಾಲಾ ಬಸ್ ಮಗುಚಿ 5 ಮಕ್ಕಳು ದುರ್ಮರಣ