Webdunia - Bharat's app for daily news and videos

Install App

ನಕಲಿ ಆಧಾರ್​​​ ಕಾರ್ಡ್ ಮಾಡ್ತಿದ್ದವರು ಅಂದರ್​​

Webdunia
ಭಾನುವಾರ, 25 ಸೆಪ್ಟಂಬರ್ 2022 (20:46 IST)
ಬೆಂಗಳೂರಿನಲ್ಲಿ ನಕಲಿ ಪ್ರಕ್ರಿಯೆ ಮೂಲಕ ಆಧಾರ್ ಕಾರ್ಡ್ ಮಾಡಿಕೊಡಲಾಗ್ತಾ ಇದ್ದು, ಈ ಸಂಬಂಧ ಬೊಮ್ಮನಹಳ್ಳಿ ಠಾಣೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನಿಲ್, ರೂಪಂ ಭಟ್ಟಾಚಾರ್ಯ, ರವಿ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನಕಲಿ ವಿಳಾಸ, ಹೆಸರು, ಫೋಟೋ ನೀಡಿ ಆಧಾರ್ ಕಾರ್ಡ್ ಕೊಡಿಸುತ್ತಿದ್ರು. 
6 ಜನರ ಪೈಕಿ ಒಬ್ಬೊಬ್ಬರು ಒಂದು ಜವಾಬ್ದಾರಿ ನಿರ್ವಹಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.  ವ್ಯವಸ್ಥಿತ ಜಾಲವನ್ನು ಬೊಮ್ಮನಹಳ್ಳಿ ಪೊಲೀಸರ ತಂಡ ಬಯಲಿಗೆಳೆದಿದೆ. ಬಂಧಿತ ಆರೋಪಿ ಪ್ರವೀಣ್ ಎಂಬಾತ ಮೊಬೈಲ್ ಸೆಂಟರ್ ನಡೆಸುತ್ತಿದ್ದು, ಆಧಾರ್ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್​​ಗೆ ಬೇಕಿರುವವರ ಮಾಹಿತಿ‌ ಪಡೆದು ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಮತ್ತೊಬ್ಬ ಆರೋಪಿ ರಮೇಶ್ ಆಟೋ ಚಾಲಕನಾಗಿದ್ದು, ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ ಆಫೀಸರ್ ಬಳಿ‌ ಕರೆದೊಯ್ಯುತ್ತಿದ್ದ. ಆರೋಪಿ ನಾಗರಾಜ್ ಎಂಬಾತ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಅಧಿಕೃತವಾಗಿ ಆಧಾರ್ ಪಡೆಯಲು ಬೇಕಿರುವ ಈ ಸ್ಕ್ಯಾನರ್ ದುರ್ಬಳಕೆ ಮಾಡಿಕೊಳ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments