Daily Horoscope

Select Your Language

Notifications

webdunia
webdunia
webdunia
webdunia

ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಗೆದ್ದವರಿಗೆ ಒಮ್ಮೆಯೂ ಸಚಿವ ಸ್ಥಾನ ಲಭಿಸಿಲ್ಲ

Raghavendra Hitnal
Photo Courtesy X
ಕೊಪ್ಪಳ: ವಿಧಾನಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಬೇಕೆಂದು ಒತ್ತಾಯಿಸಿ, ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ನಗರದ ಗೌರಿಶಂಕರ ದೇವಸ್ಥಾನದ ಬಳಿ ಜಮಾಯಿಸಿ ಅಲ್ಲಿಂದ ಅಶೋಕ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ಮಾಡಿದರು. ಕೇಂದ್ರಿಯ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಟೈಯರ್‌ ಸುಟ್ಟು ಅಶೋಕ ವೃತ್ತದಲ್ಲಿ ಬೈಕ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನಮ್ಮ ಮನದಾಸೆಯನ್ನು ಅರ್ಥಮಾಡಿಕೊಂಡು ರಾಘವೇಂದ್ರ ಹಿಟ್ನಾಳ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆಯ ಮಾರ್ಗದುದ್ದಕ್ಕೂ ಹಿಟ್ನಾಳ ಪರ ಘೋಷಣೆಗಳನ್ನು ಕೂಗಿದರು. ಭಿತ್ತಿಚಿತ್ರಗಳನ್ನು ಪ್ರದರ್ಶಿಸಿದರು. ಮಧ್ಯಪ್ರವೇಶಿಸಿದ ಪೊಲೀಸರು ಅರೆಬರೆ ಸುಟ್ಟ ಬೈಕ್‌ ತೆರವು ಮಾಡಿದರು.

ಕಾಂಗ್ರೆಸ್‌ ಮುಖಂಡರಾದ ಕೆ.ಎಂ. ಸೈಯದ್‌, ಗೂಳಪ್ಪ ಹಲಗೇರಿ, ಜ್ಯೋತಿ ಗೊಂಡಬಾಳ, ಕೃಷ್ಣ ಇಟ್ಟಂಗಿ ಸೇರಿದಂತೆ ಇತರರು ಮಾತನಾಡಿ ’ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಗೆದ್ದವರಿಗೆ ಒಂದು ಬಾರಿಯೂ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ಸಿಎಂ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಟೀಕಿಸಿದ್ದ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌