ಕಾಂಗ್ರೆಸ್ ಜಿಲ್ಲಾಧ್ಯಕ್ಷನ ವಿರುದ್ಧ ಕೊಲೆ ಬೆದರಿಕೆ ಆರೋಪ

ಬುಧವಾರ, 7 ನವೆಂಬರ್ 2018 (15:29 IST)
ಕಾಲೇಜಿನ ಪ್ರಾಂಶುಪಾಲರೊಬ್ಬರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಕಲಬುರಗಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಮತ್ತು ಅವರ ಪುತ್ರ, ಜಿಲ್ಲಾ ಪಂಚಾಯಿತಿ ಸದಸ್ಯ ರಾಜೇಶ್ ಗುತ್ತೇದಾರ್ ವಿರುದ್ಧ ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ.

ಕಲಬುರಗಿ ಪರ್ಯಾಯ ಎಂ.ಎಸ್.ಡಬ್ಲು ಕಾಲೇಜಿನ ಪ್ರಾಚಾರ್ಯ ಮಹೇಶ ರಾಠೋಡ್ ಈ ಆರೋಪ ಮಾಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಆತನ ಮಗ ತಮ್ಮ ಮೇಲೆ ಹಲ್ಲೆ ಮಾಡಿದ್ದಲ್ಲದೇ ಗುಂಡಾಗಿರಿ ವರ್ತಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ದೀಪಾವಳಿ ಹಬ್ಬದ ಉಡುಗೊರೆಯಾಗಿ ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದ ಐಡಿಯಾ