ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ಬಿಗ್ ಅಪ್‌ಡೇಟ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಇದೀಗ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಪ್ರಕರಣದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡಿನ ಮಧುರೈ ಬಳಿ ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ, ಮನಿವೆನನ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಫಿಯಟ್ ಕಾರು ಹಾಗೂ 2 ಗೋಣಿ ಚೀಲವನ್ನ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪ್‌ಕುಮಾರ್ ಹೇಳಿದ್ದಾರೆ.