ಹಾವೇರಿ: ವಾಹನಕ್ಕೆ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು ಸ್ಥಳದಲ್ಲೆ ಸಾವನಪ್ಪಿದ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ನಡೆದಿದೆ.
ಸುರೇಶ ಮೈವಾರಿ(32), ಫಕೀರೇಶ್ ಯತ್ತಿನ ಹಳ್ಳಿ(30), ಲಕ್ಷ್ಮಣ ಹುಡೇವ (32) ಸಾವನಪ್ಪಿದ ಬೈಕ್ ಸವಾರರು. ಇವರು ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ನಿವಾಸಿಗಳು. ಯಲಗಚ್ಚ ಗ್ರಾಮದ ಚೌಡೇಶ್ವರಿ ದೇವಿಯ ಜಾತ್ರೆ ಮುಗಿಸಿ ಬೈಕ್ ನಲ್ಲಿ ವಾಪಾಸ್ ಮನೆಗೆ ಬರುವಾಗ ದಾರಿಯಲ್ಲಿ ಅಪರಿಚಿತ ವಾಹನಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಗುತ್ತಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ