Select Your Language

Notifications

webdunia
webdunia
webdunia
webdunia

ಕಲುಷಿತ ನೀರು ಸೇವಿಸಿ ಮೂವರು ಸಾವು

ಕಲುಷಿತ ನೀರು ಸೇವಿಸಿ ಮೂವರು ಸಾವು
ಯಾದಗಿರಿ , ಶುಕ್ರವಾರ, 17 ಫೆಬ್ರವರಿ 2023 (17:46 IST)
ಯಾದಗಿರಿಯಲ್ಲಿ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಾವಿತ್ರಮ್ಮ, ಸಾವಮ್ಮ ಎಂಬ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಆದರೆ ಇಂದು 3 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ನರಸಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿದೆ. ಸಾವಿನ ಭಯದ ನಡುವೆ ಜನರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾ.ಅನಪೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಜನರು ಭಯಭೀತರಾಗಿದ್ದಾರೆ. ಇದರ ನಡುವೆ ಗ್ರಾಮದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕಾಲಾರ ರೋಗ ಒಕ್ಕರಿಸಿದ್ದು, ಆರೋಗ್ಯ ಇಲಾಖೆ ಗ್ರಾಮದಲ್ಲಿಯೇ ಬೀಡುಬಿಟ್ಟಿದೆ. ಜಿಲ್ಲಾಡಳಿತದ ನಿರ್ಲಕ್ಷ್ಯದ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯನ್ನ ಚುಡಾಯಿಸಿದ್ದಕ್ಕೆ ಯುವಕರಿಗೆ ಥಳಿತ