Publish Date: Tue, 07 Mar 2023 (15:50 IST)
Updated Date: Tue, 07 Mar 2023 (15:53 IST)
ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲೇ ಆಪರೇಷನ್ ಹಸ್ತ ಜೋರಾಗಿದೆ. ಈ ನಡುವೆ ಬಿಜೆಪಿಯ ಮೂವರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೊಳ್ಳೆಗಾಲ ಮಾಜಿ ಶಾಸಕ ನಂಜುಂಡಸ್ವಾಮಿ, ಜಾಲಪ್ಪ ಪುತ್ರ, ದೊಡ್ಡಬಳ್ಳಾಪುರ ಮಾಜಿ ಶಾಕ ಜೆ.ನರಸಿಂಹಸ್ವಾಮಿ ಹಾಗೂ ವಿಜಯಪುರ ಮಾಜಿ ಶಾಸಕ ಮನೋಹರ್ ಐನಾಪುರ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಈ ಮೂಲಕ ಬಿಜೆಪಿಗೆ ಚುನಾವಣೆಯ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಬಿಸಿ ಮುಟ್ಟಿದೆ
geetha
Publish Date: Tue, 07 Mar 2023 (15:50 IST)
Updated Date: Tue, 07 Mar 2023 (15:53 IST)