Select Your Language

Notifications

webdunia
webdunia
webdunia
webdunia

ಬೆಂಗಳೂರು-ಮೈಸೂರು ಹೈವೆಯ ಸರ್ವೀಸ್ ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Bangalore-Mysore Express Highway, Road Accident, Channapatna Traffic Police

Sampriya

ರಾಮನಗರ , ಗುರುವಾರ, 27 ಮಾರ್ಚ್ 2025 (14:29 IST)
ರಾಮನಗರ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಮೃತರು.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಮಾರುತಿ 800 ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Nandini milk price hike:ನಂದಿನಿ ಹಾಲಿನ ದರ 4 ರೂ ಏರಿಕೆ: ಸಾರ್ವಜನಿಕ ಬಿಗ್ ಶಾಕ್