Webdunia - Bharat's app for daily news and videos

Install App

ಬೆಂಗಳೂರು-ಮೈಸೂರು ಹೈವೆಯ ಸರ್ವೀಸ್ ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

Sampriya
ಗುರುವಾರ, 27 ಮಾರ್ಚ್ 2025 (14:29 IST)
ರಾಮನಗರ:  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಮೃತರು.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಮಾರುತಿ 800 ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments