Publish Date: Thu, 31 Aug 2017 (13:20 IST)
Updated Date: Thu, 31 Aug 2017 (13:21 IST)
ನಾಳೆ ಮೂವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಳೆ ರಾಜಭವನದ ಗಾಜಿನ ಮನೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಶಾಸಕರಾದ ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ್ ಮತ್ತು ಗೀತಾ ಮಹಾದೇವ ಪ್ರಸಾದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೊದಲು ಶಾಸಕ ಕೆ. ಷಡಕ್ಷರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಆದರೆ. ಕೊನೆಗಳಿಗೆಯಲ್ಲಿ ಅವರ ಕೈ ತಪ್ಪಿದ ಸಚಿವ ಸ್ಥಾನ ಗೀತಾ ಮಹಾದೇವ ಪ್ರಸಾದ್ ಪಾಲಾಯಿತು.
ಲಿಂಗಾಯುತ ಕೋಟಾದಲ್ಲಿ ಗೀತಾ ಮಹಾದೇವ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಕೆಪಿಸಿಸಿ ಮುಖಂಡರು ಸಮರ್ಥಿಸಿಕೊಂಡಿದ್ದಾರೆ.
ಆದರೆ, ಯಾರು ಸಂಪುಟಕ್ಕೆ ಸೇರುತ್ತಾರೆ ಎನ್ನುವುದು ನಾಳೆ ಬಹಿರಂಗವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಮತ್ತೊಂದು ಅನುಮಾನಕ್ಕೆ ಕಾರಣವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.