ಬೆಳಗಾವಿ : ಗೃಹಿಣಿಯರ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದಾರೆ.
ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ಘೋಷಿಸಿದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಕೂಡ ಒಂದು. ಗೃಹಲಕ್ಷ್ಮೀ ಹಣ ಪ್ರತೀ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ಜಮವಾಗುತ್ತಿದೆ. ಆದರೆ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾವಣೆಗೊಂಡಿಲ್ಲ. ಇದರಿಂದಾಗಿ ಅದೆಷ್ಟೋ ಜನ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಈ ಹಣವನ್ನು ಬಿಡುಗಡೆ ಮಾಡುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.