Publish Date: Sat, 14 Oct 2017 (08:37 IST)
Updated Date: Sat, 14 Oct 2017 (08:44 IST)
ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದು ನಿನ್ನೆ ಸುರಿದ ಭಾರೀ ಮಳೆಗೆ ದೇವಸ್ಥಾನದ ಅರ್ಚಕ ಸೇರಿದಂತೆ ಮೂವರು ಬಲಿಯಾಗಿದ್ದಾರೆ.
ಕುರುಬರ ಹಳ್ಳಿ ವಾರ್ಡ್ ನ ಎಚ್ ಬಿಕೆ ಲೇಔಟ್ ಬಳಿಯ ದೇವಾಲಯದ ಅರ್ಚಕ ವಾಸುದೇವಾಚಾರ್ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತದೇಹಕ್ಕಾಗಿ ಎನ್ ಡಿ ಆರ್ ಎಫ್ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದೆ.
ಇನ್ನೊಂದೆಡೆ ಲಗ್ಗೆರೆಯಲ್ಲಿ ರಾಜಾಕಾಲುವೆ ಬಳಿಯಲ್ಲೇ ಇದ್ದ ತಾಯಿ, ಮಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತರನ್ನು ಮೀನಾಕ್ಷಿ (57) ಮತ್ತು ಪುಷ್ಪಾ (22) ಎಂದು ಗುರುತಿಸಲಾಗಿದೆ. ಇದೇ ವೇಳೆ ಮಳೆಯಿಂದಾಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ನಿನ್ನೆ ರಾತ್ರಿ ನಗರದ ಹಲವೆಡೆ ಭಾರೀ ಮಳೆಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ನೀರು ನಿಂತಿದ್ದರಿಂದ ಸಂಚಾರ ಸಮಸ್ಯೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ