Select Your Language

Notifications

webdunia
webdunia
webdunia
webdunia

ವಿದ್ಯುತ್ ತಂತಿ ತುಳಿದು ಮೂವರು ಸಾವು

Three people died after stepping on electric wires
ಮೈಸೂರು , ಭಾನುವಾರ, 6 ನವೆಂಬರ್ 2022 (17:23 IST)
ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ದಾರುಣವಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಪ್ಪ ಮಗ ಮತ್ತು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಚೇಗೌಡ, ಹರೀಶ್ ಹಾಗೂ ಕುಮಾರಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಭತ್ತದ ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜಮೀನಿನ‌ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಕ್ಕೆ ಬಿದ್ದಿತ್ತು. ಇದನ್ನು ಗಮನಿಸದೇ ಜಮೀನಿನಲ್ಲಿ ಕೆಲಸಕ್ಕೆ ಇಳಿದಿದ್ರು. ವಿದ್ಯುತ್ ಪ್ರವಹಿಸುತ್ತಿರುವುದು ಗೊತ್ತಿಲ್ಲದೆ ತಂತಿ ತುಳಿದು ರೈತರು ಸಾವನ್ನಪ್ಪಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪುಅಭಿಮಾನಿಗಳಿಂದ ಮಕ್ಕಳಿಗೆ ಉಚಿತ ಚಿತ್ರ ಪ್ರದರ್ಶನ