Select Your Language

Notifications

webdunia
webdunia
webdunia
webdunia

ಬಸ್ ಹರಿದು ಮೂವರು ವಿದ್ಯಾರ್ಥಿಗಳು ದುರ್ಮರಣ!

ಬಸ್ ಹರಿದು ಮೂವರು ವಿದ್ಯಾರ್ಥಿಗಳು ದುರ್ಮರಣ!
ಬಳ್ಳಾರಿ , ಮಂಗಳವಾರ, 20 ಡಿಸೆಂಬರ್ 2022 (08:07 IST)
ಬಳ್ಳಾರಿ : ರಸ್ತೆ ದಾಟುವ ವೇಳೆ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ ಹರಿದು ಹೊಡೆದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18), ಸಂಡೂರು ತಾಲೂಕಿನ ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಡುಬಡತನಲ್ಲಿ ಬೆಳೆದ ಈ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಶಾಲೆಗೆ ರಜೆ ಇರುವಾಗಲೆಲ್ಲ ಪಾರ್ಟ್ ಟೈಮ್ ಕೆಲಸಕ್ಕೆ ಹೋಗುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕೆಲಸ ಮುಗಿಸಿಕೊಂಡು ಹಾಸ್ಟೆಲ್ಗೆ ವಾಪಸ್ ಹೋಗಲು ರಸ್ತೆ ದಾಟುವಾಗ ಕಲಬುರಗಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಬಳ್ಳಾರಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಕಿಡಿಕೇಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಅಲೋಕ್ ಕುಮಾರ್