ಪಿಯುಸಿ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆ ಹಿನ್ನೆಲೆಯಲ್ಲಿ ಆಯಾ ಪರೀಕ್ಷಾ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನೆ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಪ್ರಶ್ನೆ ಪತ್ರಿಕೆಗಳು ಪದೇ ಪದೇ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಆಯಾ ಪರೀಕ್ಷಾ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನೆ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಾಂ ಭಟ್ ಅವರ ನೇಮಕ ಕುರಿತಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾದಾನ ಹೊಂದಿರುವ ವಿಚಾರವಾಗಿ ಮಾತನಾಡಿದ ಸಚಿವರು, ಈಗಾಗಲೇ ರಾಜ್ಯ ಸರಕಾರ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶ್ಯಾಮ್‌ಭಟ್ ಅವರ ಹೆಸರನ್ನು ಶಿಫಾರಸ್ಸು ಮಾಡಿದೆ. ಮುಂದಿನ ವಿಚಾರ ರಾಜ್ಯಪಾಲರಿಗೆ ಬಿಟ್ಟಿದ್ದು. ರಾಜ್ಯಪಾಲರು ಶ್ಯಾಮ್‌ಭಟ್ ಕುರಿತು ಲೋಕಾಯುಕ್ತದಲ್ಲಿ ಕ್ಲಾರಿಫಿಕೇಶನ್ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ