Select Your Language

Notifications

webdunia
webdunia
webdunia
webdunia

ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ರಣಬಿಸಿಲು: ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ

ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ರಣಬಿಸಿಲು: ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ

Sampriya

ಬೆಂಗಳೂರು , ಗುರುವಾರ, 28 ಮಾರ್ಚ್ 2024 (15:19 IST)
Photo Courtesy Webdunia
ಬೆಂಗಳೂರು: ಕರ್ನಾಟಕವು ಬುಧವಾರ 40 ಡಿಗ್ರಿ ಸೆಲ್ಸಿಯಸ್ ಗಡಿಯನ್ನು ಮೀರಿದ್ದು, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕ್ರಮವಾಗಿ 40.6 ಮತ್ತು 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಇನ್ನೂ ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಬಿಸಿಲಿ ಶಾಖ ಗರಿಷ್ಠ ಮಟ್ಟದಲ್ಲಿರಲಿದೆ ಎಂದು ಹೇಳಲಾಗಿದೆ. ‌

ರಾಜ್ಯದಲ್ಲಿ ಈ ವರ್ಷ ಬೇಸಿಗೆಯ ಆರಂಭದ ಪ್ರಾರಂಭದಲ್ಲೇ  40 °ಸೆಲ್ಸಿಯಸ್‌ ಅನ್ನು ದಾಟಿದ ಮೊದಲ ನಿದರ್ಶನವಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ತಿಳಿಸಿದ್ದಾರೆ.

ಇನ್ನೂ ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಹೀಟ್‌ವೇವ್ ಅಲರ್ಟ್ ಅನ್ನು ಧ್ವನಿಸಿದೆ, ಬೆಂಗಳೂರಿನಲ್ಲಿ ದಿನದ ತಾಪಮಾನವು 2 ° C ವರೆಗೆ ಹೆಚ್ಚಾಗುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ರಾಜೀನಾಮೆ ಬೆದರಿಕೆ, ಬೆಚ್ಚಿದ ವೀಕ್‌ ಸಿಎಂ: ಆರ್‌.ಅಶೋಕ್ ವ್ಯಂಗ್ಯ