ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆದೆ. 24 ಜಿಲ್ಲೆಗಳಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವ ಇದೆ. ಸೋಮವಾರ, ಮಂಗಳವಾರವೂ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದ ಬಹುತೇಕ ಕಡೆ ಒಣಹವೆ ಇರಲಿದ್ದು, ಕೆಲವೆಡೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.