Publish Date: Sun, 03 Sep 2017 (18:09 IST)
Updated Date: Sun, 03 Sep 2017 (18:11 IST)
ಬಿಜೆಪಿ ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಮುಖಂಡರು ಬಹಿರಂಗವಾಗಿ ಹೇಳಿಕೆ ನೀಡುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಸಂಪೂರ್ಣವಾಗಿ ಹೈಕಮಾಂಡ್ ನಿರ್ವಹಿಸುತ್ತದೆ. ಇದರಲ್ಲಿ ರಾಜ್ಯ ನಾಯಕರ ಹಸ್ತಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಗಾಗಿ ಸಿದ್ದತೆ ಆರಂಭಿಸಿ. ಬೂತ್ ಮಟ್ಟದ ಸಮಿತಿಗಳನ್ನು ರಚಿಸಬೇಕು. ಪಕ್ಷ ಸಂಘಟನೆಗಾಗಿ ಹಗಲಿರಳು ಶ್ರಮಿಸಿ ಎಂದು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.
ಪ್ರಧಾನಿ ಮೋದಿ ಸರಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಬೇಕು. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರಕಾರವನ್ನು ಕಿತ್ತೊಗೆಯಲು ಪ್ರಯತ್ನಿಸಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.