Publish Date: Sun, 24 Sep 2023 (15:50 IST)
Updated Date: Sun, 24 Sep 2023 (15:59 IST)
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯ್ತು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ರು. ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಸಿಬ್ಬಂದಿ ಹಾಗೂ ಕನ್ನಡ ಪರ ಹೋರಾಟಗಾರ ಮದ್ಯೆ ಮಾತಿನ ಚಕಮಕಿ ನಡೆದಿದ್ದು, ಕೆಲವರನ್ನ ಪೊಲೀಸರು ವಶಕ್ಕೆ ಪಡೆದ್ರು.