ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಇಂದು ವಿಚಾರಣೆಗೆ ಹಾಜರಾಗ ಬೇಖಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಇಂದು ಗೈರಾಗಿದ್ದಾರೆ.
ಆಪ್ತರ ಮೂಲಕ ಪೊಲೀಸರಿಗೆ ಮನವಿ ಮಾಡಿದ್ದ ತಿಮರೋಡಿ ಇಂದು ಬೆಳ್ತಂಗಡಿ ಪೊಲೀಸರ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಾಕ್ಷಿಯಾಗಿ ಆಗಮಿಸಿ ಈಗ ಬಂಧನಕ್ಕೆ ಒಳಗಾದ ಚಿನ್ನಯ್ಯನನ್ನು ತಿಮರೋಡಿ ಮನೆಗೆ ಕರೆದುಕೊಂಡು ವಿಶೇಷ ತನಿಖಾ ತಂಡದ ಪೊಲೀಸರು ಮಹಜರು ಮಾಡಿದ್ದರು. ಮಹಜರು ಮಾಡುವ ವೇಳೆ ತಿಮರೋಡಿ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್ಐಟಿ ಎಸ್ಪಿ ಸಿ.ಎ. ಸೈಮನ್ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ARMS ACT 1959(U/S-25(1),25(1-A),24(1-B)(a)) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಚಾರಣೆಗೆ ಗೈಗೈರಾಗಿರುವ ಹಿನ್ನೆಲೆ ತಿಮರೋಡಿಗೆ ಎರಡನೇ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.ಲ